Monday, 16 May 2011

ಉಪೇಂದ್ರ ಮತ್ತು ಪಿ.ವಾಸು ಸಂಗಮದಲ್ಲಿ ನೂತನ ಚಿತ್ರ



'ಆಪ್ತಮಿತ್ರ', 'ಆಪ್ತರಕ್ಷಕ'ದಂತಹ ಯಶಸ್ವಿ ಚಿತ್ರಗಳ ನಿರ್ದೇಶಕ ಪಿ.ವಾಸು ನಿರ್ದೇಶಿಸುತ್ತಿರುವ ನೂತನ ಚಿತ್ರದಲ್ಲಿ ಸೂಪರ್‌ಸ್ಟಾರ್ ಉಪೇಂದ್ರ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ವಿಭಿನ್ನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಚಿತ್ರೀಕರಣ ಮೇ ಹದಿನೆಂಟರಂದು ಮೈಸೂರಿನಲ್ಲಿ ಆರಂಭವಾಗಲಿದೆ.

ಉದಯರವಿ ಫಿಲಂಸ್ ಲಾಂಛನದಡಿಯಲ್ಲಿ ಕೃಷ್ಣಪ್ರಜ್ವಲ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 'ಆಪ್ತರಕ್ಷಕ' ಚಿತ್ರದ ನಂತರ ಇವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡುತ್ತಿದ್ದಾರೆ. ಐದು ಹಾಡುಗಳು ಚಿತ್ರದಲ್ಲಿದೆ. ಈ ಪೈಕಿ ಎರಡು ಹಾಡುಗಳ ಚಿತ್ರೀಕರಣ ವಿದೇಶದಲ್ಲಿ ನಡೆಯಲಿದೆ ಎನ್ನುತ್ತಾರೆ ನಿರ್ಮಾಪಕರು.

ಮೈಸೂರು, ಕೇರಳ ಹಾಗೂ ವಿದೇಶದಲ್ಲಿ ಈ ಚಿತ್ರಕ್ಕೆ ಒಟ್ಟು ಎಂಭತ್ತೆರಡು ದಿನಗಳ ಚಿತ್ರೀಕರಣ ನಡೆಯಲಿದೆ. ಸದಾ, ಸೀತಾ, ಶಯಾಜಿ ಶಿಂಧೆ, ರಾಗಿಣಿ ಮುಂತಾದವರ ತಾರಾಬಳಗ ಈ ಚಿತ್ರಕ್ಕಿದೆ.ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸುರೇಶ್ ಅರಸ್ ಸಂಕಲನ, ವೇಣು ಕಲಾ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಮತ್ತು ಚಂಪಕಧಾಮ ಬಾಬು ನಿರ್ಮಾಣ ನಿರ್ವಹಣೆ ಈ ನೂತನ ಚಿತ್ರಕ್ಕಿದೆ. 


English summary
P.Vasu to direct Kannada Super Star Upendra. The movie will be launched in Mysore on May 18. P.Vasu has written the story and script for this film.The film will be produced by Krishna Prajwal, the producer of Aaptha Rakshaka.

No comments:

Post a Comment